ಹುಬ್ಬಳ್ಳಿ
ಮಿಲ್ಲತ್ತ ನಗರದಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ..!
ಹುಬ್ಬಳ್ಳಿ:ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾದ ಘಟನೆ ನಗರದಲ್ಲಿ ರವಿವಾರ ರಾತ್ರಿ ನಡೆದಿದೆ.
ತೌಶೀಫ್ ಎಂಬ ಯುವಕನ ಮೇಲೆ ಮಿಲ್ಲತ್ತ ನಗರದಲ್ಲಿ ಯುವಕರ ಗುಂಪೊಂದು ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಆತನ ಮುಖ ಹಾಗೂ ಎದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ತೌಶೀಫ್ ಗಂಭೀರವಾಗಿ ಗಾಯಗೊಂಡಿದ್ದಾನೆ.
ಕೂಡಲೇ ತೌಶೀಫ್ ನನ್ನು ಸ್ನೇಹಿತರ ಸಹಾಯದಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ, ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಘಟನಾ ಸ್ಥಳಕ್ಕೆ ಬೆಂಡಿಗೇರಿ ಠಾಣೆಯ ಪೊಲೀಸರು ಭೇಟಿ ನೀಡಿ ಘಟನೆಯ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.