ಬೆಳಗಾವಿಬ್ರೇಕಿಂಗ್ ನ್ಯೂಸ್
“ಬೈಕ್’ಗಳ” ನಡುವೆ ಭೀಕರ ಅಪಘಾತ ಸ್ಥಳದಲ್ಲೇ “ನಾಲ್ಕು” ಜನರ ಸಾವು
ಬೆಳಗಾವಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ಕು ಜನ ಬೈಕ್ ಸವಾರರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಪೊಲೀಸ್ ಠಾಣೆಯ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ಕು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಎರಡು ಬೈಕ್ ಸವಾರರು ಅತಿ ಜೋರಾಗಿ ಬೈಕ್ ಚಾಲನೆ ಮಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು,ಮೃತಪಟ್ಟ ಬೈಕ್ ಸವಾರರು ಯಾರು ಎಂಬ ಮಾಹಿತಿ ಇನ್ನು ತಿಳಿದು ಬಂದಿಲ್ಲ ಸ್ಥಳಕ್ಕೆ ರಾಯಬಾಗ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ