ಅಪರಾಧನಮ್ಮೂರುಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ “ಭೀಕರ” ಅಪಘಾತ ಓರ್ವ ಬೈಕ್ ಸವಾರ “ಸ್ಥಳದಲ್ಲೇ ಸಾವು”..!

Spread the love

ಹುಬ್ಬಳ್ಳಿ:ಕಾರವಾರ ರಸ್ತೆಯಲ್ಲಿ ಬೈಕ್ ಹಾಗೂ ಜೆಸಿಬಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಇನ್ನುಳಿದ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ಮೂರು ಗಂಟೆಗೆ ನಡೆದಿದೆ.

ಅಂಚಟಗೇರಿ ಕಡೆಯಿಂದ ಹುಬ್ಬಳ್ಳಿಯತ್ತ ಅತಿಜೋರಾಗಿ ಬರುತ್ತಿದ್ದ ಬೈಕ್ ಕಾರವಾರ ರಸ್ತೆಯಲ್ಲಿನ ಐಸ್ ಪ್ಯಾಕ್ಟರಿ ಬಳಿಯಲ್ಲಿ,ರಸ್ತೆ ಮದ್ಯ ಏಕಾಏಕಿ ಜೆಸಿಬಿ ಬಂದ ಹಿನ್ನೆಲೆ ಬೈಕ್ ನಿಯಂತ್ರಣ ತಪ್ಪಿ ಜೆಸಿಬಿ ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅಪಘಾತದಲ್ಲಿ ಬೈಕ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.

ಅಪಘಾತದಲ್ಲಿ ಗಾಯಗೊಂಡ ಇನ್ನುಳಿದ ಬೈಕ್ ಸವಾರರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದ್ದು,ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ದಕ್ಷಿಣ ಸಂಚಾರಿ ಠಾಣೆಯ ಇನ್ಸ್ಪೆಕ್ಟರ್ ಕುಂಬಾರ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಂದ ಮಾಹಿತಿ ಪಡೆದಿದ್ದಾರೆ.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page