ಹುಬ್ಬಳ್ಳಿಯ ‘ನೂಲ್ವಿ ಕ್ರಾಸ್’ ಬಳಿಯಲ್ಲಿ ಭೀಕರ ಅಪಘಾತ ವೃದ್ಧನ ಸ್ಥಿತಿ ಗಂಭೀರ..!?
ಹುಬ್ಬಳ್ಳಿ : ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಹುಬ್ಬಳ್ಳಿ ತಾಲೂಕಿನ ನೂಲ್ವಿ ಕ್ರಾಸ್ ಬಳಿಯಲ್ಲಿ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು ಕೂಡಲೇ ಇವರನ್ನು ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಧ್ಯ ವೃದ್ಧರ ಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿಯನ್ನು ನೀಡಿದ್ದು ಪರಿಶೀಲನೆ ನಡೆಸಿ ಕಾರಿನಲ್ಲಿದ್ದವರ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.