ಎಕ್ಸ್ಲುಸೀವ್ನಮ್ಮೂರುಬ್ರೇಕಿಂಗ್ ನ್ಯೂಸ್ಹುಬ್ಬಳ್ಳಿ- ಧಾರವಾಡ

ಹುಬ್ಬಳ್ಳಿಯ “ಗಾಳಿ ದುರ್ಗಮ್ಮ” ದೇವಸ್ಥಾನದ ಬಳಿ ಭೀಕರ ಅಪಘಾತ,ಪಾದಾಚಾರಿ ಸ್ಥಳದಲ್ಲೇ ಸಾವು.

Spread the love

ಹುಬ್ಬಳ್ಳಿ : ರಸ್ತೆ ದಾಟುತ್ತಿದ್ದ ಪಾದಾಚಾರಿಯ ಮೇಲೆ ಮರಳು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಹರಿದ ಪರಿಣಾಮ ಪಾದಾಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಈಗಷ್ಟೇ ನಡೆದಿದೆ.

ಹುಬ್ಬಳ್ಳಿಯ ಗಾಳಿ ದುರ್ಗಮ್ಮ ದೇವಸ್ಥಾನದ ಬಳಿಯಲ್ಲಿ ರಸ್ತೆ ದಾಟುತ್ತಿದ್ದಾಗ ಲಾರಿ ಪಾದಚಾರಿ ಮೇಲೆ ಹರಿದು ಈ ಘಟನೆ ನಡೆದಿದೆ. ಇನ್ನು ಮೃತಪಟ್ಟ ವ್ಯಕ್ತಿ ಯಾರು ಎಂಬ ಮಾಹಿತಿ ಇನ್ನು ಲಭ್ಯವಾಗಿಲ್ಲ.

ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ ಕೀಮ್ಸ್ ಶವಾಗರಕ್ಕೆ ರವಾನೆ ಮಾಡಿದ್ದು.

ಈ ಸಂಬಂಧ ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸರು ಅಪಘಾತ ಪಡಿಸಿದ ಲಾರಿಯನ್ನು ವಶಕ್ಕೆ ಪಡೆದಿದ್ದು, ಪ್ರಕರಣವನ್ನು ದಾಖಲು ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page