ಅಪರಾಧಹುಬ್ಬಳ್ಳಿ

ವಿದ್ಯಾರ್ಥಿಗೆ “ಸಲಿಕೆಯಿಂದ” ಹೊಡೆದು “ಕೊಲೆ” ಮಾಡಿದ ಶಿಕ್ಷಕ..!

Spread the love

ಹುಬ್ಬಳ್ಳಿ:ಅತಿಥಿ ಶಿಕ್ಷಕನ ಹುಚ್ಚಾಟದಿಂದ ಶಾಲಾ ವಿದ್ಯಾರ್ಥಿ ಸಾವನಪ್ಪಿ ಶಿಕ್ಷಕಿಯೊಬ್ಬಳು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ,ನರಗುಂದ ತಾಲ್ಲೂಕಿನ ಹದ್ಲಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಹದ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಗೀತಾ ಬಾರಕೇರ ಹಾಗೂ ಆಕೆಯ ಮಗ ಭರತ ಮೇಲೆ ಅದೇ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಮುತ್ತಪ್ಪ ಕುರಿ ಎಂಬಾತ ಸಲಕೆಯಿಂದ ತಾಯಿ ಮತ್ತು ಮಗನಿಗೆ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.

ಕೂಡಲೇ ತಾಯಿ ಮತ್ತು ಮಗನನ್ನು ನರಗುಂದ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಚಿಕಿತ್ಸೆ ಅಗತ್ಯವಿದ್ದ ಕಾರಣ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲು ಆಗಮಿಸುತ್ತಿದ್ದಾಗ, ಭರತ ಮಾರ್ಗಮಧ್ಯಯೇ ಅಸುನೀಗಿದ್ದು, ಗೀತಾ ಸಾವು ಬದುಕಿನ ನಡುವೆ ಕಿಮ್ಸ್ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟವನ್ನು ನಡೆಸುತ್ತಿದ್ದು.

ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ನರಗುಂದ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ ನೀಡಿ ಘಟನೆಯ ಕುರಿತು ಸ್ಥಳೀಯರಿಂದ ಮಾಹಿತಿಯನ್ನು ಕಲೆ ಹಾಕುತ್ತಿದ್ದು,ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page