ಅಪರಾಧನಮ್ಮೂರುಬ್ರೇಕಿಂಗ್ ನ್ಯೂಸ್
ಹುಬ್ಬಳ್ಳಿಯಲ್ಲಿ ಚಲಿಸುತ್ತಿದ್ದ “ರೈಲಿನಿಂದ” ಬಿದ್ದ ಯುವಕನ ಸ್ಥಿತಿ ಗಂಭೀರ
ಹುಬ್ಬಳ್ಳಿ:ಚಲಿಸುತ್ತಿದ್ದ ರೈಲಿನಿಂದ ಯುವಕನೊಬ್ಬ ಆಕಸ್ಮಿಕವಾಗಿ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಕೀಮ್ಸ್ ಆಸ್ಪತ್ರೆಗೆ ದಾಖಲಾದ ಘಟನೆ ನಗರದಲ್ಲಿ ಮುಂಜಾನೆ ಸಂಭವಿಸಿದೆ.
ಇಂದು ಬೆಳಿಗ್ಗೆ ಹುಬ್ಬಳ್ಳಿಯಿಂದ ಬೆಂಗಳೂರಿನತ್ತ ಹೋಗುತ್ತಿದ್ದ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ ಸಂತೋಷ ಎಂಬ ಯುವಕ ಬೋಗಿಯ ಬಾಗಿಲು ಬಳಿ ನಿಂತಾಗ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ.
ಕೂಡಲೇ ರೈಲಿನಲಿದ್ದ ಪ್ರಯಾಣಿಕರು ರೈಲ್ವೇ ಪೊಲೀಸರಿಗೆ ಮಾಹಿತಿಯನ್ನು ರವಾನಿಸಿದ್ದು, ಸ್ಥಳಕ್ಕೆ ಆಗಮಿಸಿದ ರೈಲ್ವೇ ಪೊಲೀಸರು ಗಾಯಗೊಂಡು ಬಿದ್ದಿದ್ದ ಯುವಕನನ್ನು ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.