ಅಪರಾಧಹುಬ್ಬಳ್ಳಿ- ಧಾರವಾಡ

ಕುರಿಗಾಯಿ ಮಹಿಳೆ ಮೇಲಿನ ಹತ್ಯೆ, ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಅಪರಾಧಿಗೆ ಗಲ್ಲು ಶಿಕ್ಷೆ ನೀಡಲು ಬಸವರಾಜ ಮಲಕಾರಿ ಆಗ್ರಹ

Spread the love

ಹುಬ್ಬಳ್ಳಿ : ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಕುರಿಗಾಯಿ ಮಹಿಳೆ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿರುವ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಶ್ರೀ ಕನಕ ಸೇವಾ ಸಮಿತಿ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ಇಲ್ಲಿನ ಅಂಬೇಡ್ಕರ್ ವೃತ್ತದಿಂದ ಸಂಗೊಳ್ಳಿ ರಾಯಣ್ಣನ ವೃತ್ತದವರೆಗೆ ರ್ಯಾಲಿ ಮಾಡಿ, ಡಾ. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನೆ ನಡೆಸಿ ತಹಶಿಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ನಂತರ ಕುರುಬ ಸಮಾಜದ ಮುಖಂಡ ಬಸವರಾಜ ಮಲಕಾರಿ ಮಾತನಾಡಿ, ವಿವಿಧ ಸಂಘಟನೆ, ಸಂಘ-ಸಂಸ್ಥೆಗಳು ಎಲ್ಲರೂ ಪಕ್ಷಾತೀತವಾಗಿ ಕುರಿಗಾಯಿ ಮಹಿಳೆ ಲಕ್ಷ್ಮೀ ಕಳ್ಳಿಮನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಖಂಡನೀಯವಾಗಿದ್ದು , ಆರೋಪಗಳಿಗೆ ಉಗ್ರವಾದ ಶಿಕ್ಷೆ ವಿಧಿಸಬೇಕು. ಅಲ್ಲದೇ ತೆಲಂಗಾಣದ ಮಾದರಿಯಲ್ಲಿ ಅತ್ಯಾಚಾರಗೈದ ಆರೋಪಿಗೆ ಎನ್ ಕೌಂಟರ್ ಮಾಡಿ ಶಿಕ್ಷೆ ವಿಧಿಸಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.

ಕೊಲೆಯಾದ ಕುರಿಗಾಯಿ ಮಹಿಳೆಗೆ ೫೦ ಲಕ್ಷ ಪರಿಹಾರ, ಆಕೆಯ ಮೂರು ಮಕ್ಕಳಿಗೆ ವಿದ್ಯಾಭ್ಯಾಸವನ್ನು ಸರ್ಕಾರ ನೋಡಿಕೊಳ್ಳಬೇಕು ಹಾಗೂ ಕುರಿಗಾರರಿಗೆ ಗನ್ ಲೈಸನ್ಸ್ ನೀಡಬೇಕು ಎಂದು ಆಗ್ರಹಿಸಿದರು.

ಕುರಿಗಾಯಿಗಳ ಮೇಲಿನ ದೌರ್ಜನ್ಯ, ಶೋಷಣೆ, ಕೊಲೆ,ಅತ್ಯಚಾರ ಖಂಡಿಸಿ ಸಾಂಕೇತಿಕವಾಗಿ ಪ್ರತಿಭಟನೆ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, ಹೀಗೆ ಆದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ರಾಜ್ಯ ಎಲ್ಲ ತಾಲೂಕಿನಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕಿದೆ ಎಂದರು.
ಈ ವೇಳೆಯಲ್ಲಿ ಸಂಗೊಳ್ಳಿ ರಾಯಣ್ಣನ ವೃತ್ತದ ಬಳಿ ರಸ್ತೆ ತಡೆದು ತಮ್ಮ ಆಕ್ರೋಶ ಹೊರ ಹಾಕಿದರು.

ಪ್ರತಿಭಟನಾ ಸಂದರ್ಭದಲ್ಲಿ ಮನಸೂರು ಬಸವರಾಜ ಶ್ರೀಗಳು, ಸಿದ್ದಣ್ಣ ತೇಜಿ, ರಮೇಶ ನಲವಡಿ, ನಿರ್ಮಲಾ ಹೊಂಗಳ, ರೇಣುಕಾ ಹೊಂಗಲ, ಭಾಗ್ಯಶ್ರೀ ಬಾಬಾಣ್,ಹನುಮಂತ ಬುರ್ಲಿ, ರವಿ ಕಂಬಳಿ ವಿವಿಧ ಕುರುಬ ಸಂಘಟನೆಗಳು ಸೇರಿದಂತೆ ನೂರಾರು ಕುರಿಗಾರರು ಪಾಲ್ಗೊಂಡಿದ್ದರು

Related Articles

Leave a Reply

Your email address will not be published. Required fields are marked *

Check Also
Close
Back to top button
Breaking News
HomeHomeHomeHomeSample Page

You cannot copy content of this page