‘ಪೊಲೀಸ್ ಕಾನ್ಸ್ಟೇಬಲ್’ ನಿಂದಲೇ ಒಂಟಿ ಮಹಿಳೆ ಮೇಲೆ “ಅತ್ಯಾಚಾರಕ್ಕೆ” ಯತ್ನ.!
ಚಿಕ್ಕಬಳ್ಳಾಪುರ: ಒಂಟಿ ಮಹಿಳೆಯ ಮೇಲೆ ಪೊಲೀಸ್ ಪೇದೆಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಕಾನ್ಸ್ಟೇಬಲ್ ಮೇಲೆ ಪ್ರಕರಣವನ್ನು ದಾಖಲು ಮಾಡಿದ ಘಟನೆ ನಡೆದಿದೆ.
ಮನೆಯಲ್ಲಿ ಒಂಟಿಯಾಗಿದ್ದ ವೇಳೆಯಲ್ಲಿ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ದೇಶ ಎಂಬಾತನೇ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಅಂತಾ ಮಹಿಳೆ ದೂರನ್ನು ನೀಡಿದ್ದಾಳೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಕಾನ್ಸ್ಟೇಬಲ್ ಸಿದ್ದೇಶ ಮನೆಗೆ ನುಗ್ಗಿ ಮಹಿಳೆಯನ್ನು ನಿನಗೆ ಗಂಡ ಇಲ್ಲ ಹೀಗಾಗಿ ನಾನೇ ನಿನ್ನನ್ನು ನೋಡಿಕೊಳ್ಳುತ್ತೇನೆ ಎಂದು ತಬ್ಬಿಕೊಂಡು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಈ ಘಟನೆಯ ಸಂಬಂಧ ಮಹಿಳೆ ಶಿಡ್ಲಘಟ್ಟ ಗ್ರಾಮಾಂತರ ಠಾಣೆಗೆ ದೂರನ್ನು ಕೊಡಲು ಹೋದರು ಕೂಡಾ ಠಾಣೆಯಲ್ಲಿ ದೂರನ್ನು ತೆಗೆದುಕೊಂಡಿಲ್ಲ, ಹೀಗಾಗಿ ಮಹಿಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೆ ಕೆ ಮಿಥುನ್ ಹತ್ತಿರ ತಮ್ಮ ಅಳಲನ್ನು ತೋಡಿಕೊಂಡ ನಂತರ ಪೊಲೀಸ್ ವರಿಷ್ಠಾಧಿಕಾರಿ ಆದೇಶದ ಮೇರೆಗೆ ಕಾನ್ಸ್ಟೇಬಲ್ ಸಿದ್ದೇಶ ಮೇಲೆ ಪ್ರಕರಣ ದಾಖಲು ಮಾಡಿದ್ದಾರೆ